ಬೆಂಗಳೂರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ 25-26 ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ಶ್ರೀನಿವಾಸಪುರದ ಮಹಿಳಾ ಉದ್ಯಮಿ ಗುಂಡಮನತ್ತ ರತ್ನಮ್ಮ ಅವರಿಗೆ ಪ್ರದಾನ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2025 -26 ನೇ ಸಾಲಿನ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಇಂದು 24.03.2026 ಮಂಗಳವಾರ,ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ನೀಡಿ ಗೌರವಿಸಿದರು.
ತಾಲೂಕಿನ ಕಸಬಾ ಹೋಬಳಿಯ ಗುಂಡಮ್ಮನತ್ತ ಗ್ರಾಮದ ರತ್ನಮ್ಮ ಅವರು Vedhik Enterprises ಮಹಿಳಾ ಕ್ಷೇತ್ರದಲ್ಲಿ ಉದ್ಯಮಿಯಾಗಿ ಉತ್ತಮ ಸಾಧನೆ ಮಾಡಿದ್ದು ಸಿರಿಧಾನ್ಯಗಳ ಉತ್ಪನ್ನಗಳ ಉದ್ಯಮ ನಡೆಸುತ್ತಿರುವ ಅವರನ್ನು ರಾಜ್ಯಮಟ್ಟದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಂಘ ಸಂಸ್ಥೆಗಳು ಗುರುತಿಸಿ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ.ಕರ್ನಾಟಕ ಸರ್ಕಾರದ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದು ಕೋಲಾರ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ,ಕೋಲಾರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಬಾಗೇವಾಡಿ ಅವರು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದು,ಇವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮೀತಿ ಸಭೆಯಲ್ಲಿ ರತ್ನಮ್ಮ ಅವರ ಹೆಸರನ್ನು ಆಯ್ಕೆಮಾಡಿ ರಾಜ್ಯಮಟ್ಟಕ್ಕೆ ಪ್ರಶಸ್ತಿಗಾಗಿ ಪ್ರಸ್ತಾವನೆ ಸಲ್ಲಿಸಿದ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯಿಂದ ಆಯ್ಕೆ ಆಗಿರುತ್ತಾರೆ.
Trending
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
- ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅಯ್ಕೆ
- ನರಸಿಂಹಸ್ವಾಮಿ ದೇವಾಲಯ ರಾಜಗೋಪುರಕ್ಕೆ ವೆಂಕಟಶಿವಾರೆಡ್ದಿ ಭೂಮಿಪೂಜೆ.
- ಶ್ರೀನಿವಾಸಪುರ ಜೆಡಿಎಸ್ ಟಿಕೆಟ್ ಹೊರಗಿನವರಿಗೆ ಇಲ್ಲ,ಭುಗಿಲೆದ್ದ ಅಸಮಾಧಾನ!
Wednesday, May 20



