ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕು ಯಾವುದೆ ರಿತೀಯಲ್ಲಿ ಅಭಿವೃದ್ಧಿ ಮಾಡಿಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆರೋಪಿಸಿದರು.
ಅವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಇಂದ್ರಾಣಿರೆಡ್ದಿ ಪರ ಮತ ಯಾಚನೆ ಹಾಗೂ ದೇಣಿಗೆ ಸಂಗ್ರಹ ಕಾರ್ಯಕ್ರಮ ನಡೆಸಿ ಮಾತನಾಡಿದರು. ಇಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಅನಕೂಲಕ್ಕೆ ತಕ್ಕಂತೆ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಯಾವುದೆ ವಾತವರಣ ಇಲ್ಲ ಎಂದು ದೂರಿದರು.ಇಲ್ಲಿನ ಪ್ರಭಾವಿ ಶಾಸಕರು ಎರಡು ಬಾರಿ ಸ್ಪೀಕರ್ ಆಗಿದ್ದರು ಮಂತ್ರಿ ಸಹ ಆಗಿದ್ದರು ಮೇಧಾವಿಯಂತೆ ಭಾಷಣ ಮಾಡುವುದರಲ್ಲಿ ಭಾರಿ ಫೇಮಸ್ಸು ಆದರೆ ತಮ್ಮ ಅನಕೂಲಕ್ಕೆ ತಕ್ಕಂತೆ ಆಡಳಿತ ನಡೆಸಿದ್ದಾರೆ ಎಂದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಾದ್ಯಂತ ಸರ್ಕಾರಿ ಅಧಿಕಾರಿಗಳು ಲಂಚ ಮತ್ತು ಭ್ರಷ್ಟಾಚಾರ ನಡೆಸುವುದನ್ನು ತಡೆಯುತ್ತೇವೆ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ತಾಲೂಕಿಗೊಂದು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಪ್ರತಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ಮಾಡಿ ಸ್ಥಳೀಯವಾಗಿ ವಿದ್ಯತ್ ಉತ್ಪಾದನೆ ಮಾಡುತ್ತೇವೆ ಜನ ಸಾಮನ್ಯರು ಬದುಕಲು ಉತ್ತಮ ವಾತವರಣ ನಿರ್ಮಾಣ ಮಾಡುತ್ತೇವೆ ಇದನ್ನೆ ನಮ್ಮ ಪಕ್ಷದ ಪ್ರಣಾಳಿಕೆ ಇದೆ ಈ ಅಧಾರದಲ್ಲಿ ಮತಯಾಚಿಸುತ್ತೇವೆ ಎಂದರು.
ಅಭ್ಯರ್ಥಿ ಇಂದ್ರಾಣಿ ರೆಡ್ಡಿ ಮಾತನಾಡಿ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿದ್ದು ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿ ನಿಮ್ಮ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



