ನ್ಯೂಜ್ ಡೆಸ್ಕ್:ಕೇರಳದಲ್ಲಿ ಬಿಸಿಲ ಬೇಗೆ ಏರುತ್ತಿದ್ದು ನೆತ್ತಿ ಸುಡುವ ಸೂರ್ಯನಿಂದ ಆಗುವ ಅನಾಹುತಗಳಿಂದ ತಪ್ಪಿಸಿಕೊಳ್ಳಲು ಜನರು ಸ್ವಯಂ ಲಾಕ್ಡೌನ್ಗೆ ಒಳಗಾಗುವಂತೆ ಕೇರಳ ಸಿಎಂ ಪಿಣರಾಯ್ ವಿಜಯನ್ ಕರೆ ನೀಡಿದ್ದಾರೆ ಜನತೆ ಆದಷ್ಟು ಬೆಳಗ್ಗೆ 11ರಿಂದ 3ರ ನಡುವೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿರುತ್ತಾರೆ.
ಕೇರಳದ ಪಾಲಕ್ಕಾಡ್, ಕೊಲ್ಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ದಾಖಲೆಯ ಉಷ್ಣಾಂಶ ಕುರಿತು ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ನೀಡಿತ್ತು.
ಮೂರು ಜಿಲ್ಲೆಗಳಲ್ಲಿ ತಾಪಮಾನ ಏರುತ್ತಿದ್ದು, 40 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ತಾಪಮಾನ ವರದಿಯಾಗಿದೆ. ಹೆಚ್ಚಿನ ಒಣಹವೆಯಿಂದಾಗಿ, ಶಾಖದ ಪರಿಣಾಮವೂ ಹೆಚ್ಚಲಿದೆ. ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಜನರು ತಮ್ಮ ಆರೋಗ್ಯ ಸುರಕ್ಷತೆಯ ಬಗ್ಗೆ ಸ್ವಯಂ ಕಾಳಜಿಗೆ ಮುಂದಾಗಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಏಪ್ರಿಲ್ 27ರವರೆಗೆ ತಮಿಳುನಾಡು, ಆಂಧ್ರಪ್ರದೇಶ ಕರಾವಳಿ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿ ಮತ್ತು ಆರ್ದ್ರ ಹವಾಮಾನ ಮುಂದುವರೆಯಲಿದೆ ಎಂದು ಇಲಾಖೆ ಮುನ್ಸೂಚನೆ ಕೊಟ್ಟಿದೆ.ಬಿಸಿಲ ತಾಪ ಹೆಚ್ಚುತ್ತಿದ್ದು, ಜನರು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅನಗತ್ಯ ಸಂಚಾರ ಮತ್ತು ಮನೆಯ ಹೊರಗಿನ ಚಟುವಟಿಕೆಗಳನ್ನು ಕಡಿಮೆ ಮಾಡಿಕೊಳ್ಳುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಕರ್ನಾಟಕದಲ್ಲೂ ತಾಪಮಾನ ಏರಿಕೆ!
ಕರ್ನಾಟಕ ರಾಜ್ಯಾದ್ಯಂತ ಇನ್ನೂ ಒಂದು ವಾರ ತಾಪಮಾನ ಏರಿಕೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲ ಬೇಗೆಗೆ ಜನರು ಬಳಲಿ ಬೆಂಡಾಗಿದ್ದು, ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ತಲುಪಿದೆ. ಇನ್ನು ಬೆಂಗಳೂರಿನಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40-42 ಡಿಗ್ರಿ ಉಷ್ಣಾಂಶ ದಾಖಲಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ವರೆಗೆ ಕಂಡು ಬರುತ್ತಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಕಂಡು ಬರುತ್ತಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನ ಏರಿಕೆಯಾಗುತ್ತಲೇ ಇರುವುದರಿಂದ ಜನರು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡುವುದನ್ನು ನಿಲ್ಲಿಸಿ,ಉಷ್ಣಾಘಾತದಿಂದ ರಕ್ಷಿಸಿಕೊಳ್ಳಲು ನಿಯಮಿತವಾಗಿ ನೀರು, ತಂಪು ಪಾನೀಯಗಳನ್ನ ಸೇವಿಸಬೇಕು. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.
Trending
- ಕೇರಳ ದಾಖಲೆ ತಾಪಮಾನ ಸ್ವಯಂ ಲಾಕ್ಡೌನ್’ಗೆ ಒಳಗಾಗುವಂತೆ ಜನರಿಗೆ ಕರೆ
- ಶ್ರೀನಿವಾಸಪುರ:ವಾಸವಿ ಜಯಂತಿಯಲ್ಲಿ ಪಾಲ್ಗೊಂಡ ದಳಪತಿಗಳು!
- ಕೋಲಾರ:ಸೇವಾ ನ್ಯೂನತೆ ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ!
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
Monday, April 27



