ಬೆಂಗಳೂರು:ಪತ್ರಕರ್ತರಿಗೆ ಕೋಡುತ್ತಿದ್ದ ರೈಲ್ವೆ ಪಾಸ್ ಯೋಜನೆ ಮತ್ತೆ ಪ್ರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.
ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಶಿವಾನಂದ ತಗಡೂರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದ ವತಿಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿತ್ತು ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ ಮಾಡುವ ಸೌಲಭ್ಯವನ್ನು ಪತ್ರಕರ್ತರಿಗೆ ಪಡೆದಿದ್ದರು ನಂತರದಲ್ಲಿ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ಪತ್ರಕರ್ತರಿಗೆ ಲಭ್ಯವಿದ್ದ ಯೋಜನೆಯು ಇಲ್ಲದಂತಾಗಿದೆ. ಆದುದರಿಂದ ತಾವುಗಳು ಈ ಬಗ್ಗೆ ಮರುಚಿಂತನೆ ನಡೆಸಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಈ ಮೊದಲು ಕೊಡುತ್ತಿದ್ದ ರೈಲ್ವೆ ಪಾಸ್ ಸೌಲಭ್ಯವನ್ನು ಕೂಡಲೇ ಆರಂಭಿಸುವಂತೆ ಮನವಿ ಮಾಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



