ನ್ಯೂಜ್ ಡೆಸ್ಕ್:- ಅಕ್ರಮವಾಗಿ ವಾಸಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒರ್ವ ಮಾಜಿ ಕೌನ್ಸಿಲರ್ ನನ್ನು ಬಂಧಿಸಲಾಗಿದೆ. ಈ ಪ್ರಮಾಣ ಪತ್ರದ ಅಧಾರದಲ್ಲಿ ಅಕ್ರಮ ಬಾಂಗ್ಲಾವಾಸಿಗಳು ಭಾರತದ ಮತದಾನದ ಗುರುತಿನ ಚೀಟಿ ಮತ್ತು ಇತರೇ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀಸಾ ಅವಧಿ ಮುಗಿದ ಕಾರಣ ಬಾಂಗ್ಲಾದೇಶದ ನಾಗರಿಕ ನಯನ್ ಸರ್ಕಾರ್ ಮತ್ತು ಅವನ ಕುಟುಂಬದ ಸದಸ್ಯರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ತಂಗಿದ್ದರು ಎಂದು ಪೊಲೀಸರು ಹೇಳಿದ್ದು ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಮತ್ತು ಅವನ ಸಹೋದರ ಮತ್ತು ಪೋಷಕರಿಗೆ ನಿವಾಸಿ ಪ್ರಮಾಣಪತ್ರಗಳನ್ನು ಕೋಡಿಸಿರುತ್ತಾನೆ.
ಈ ಪ್ರಮಾಣಪತ್ರಗಳು ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಸಹಾಯ ಮಾಡಿದೆ. ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬ ಸದಸ್ಯರಿಗೆ ನಿವಾಸಿ ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮೆಶಾಕ್ನನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಲಾಗಿದೆ.
ಯಾವುದೇ ಬಾಂಗ್ಲಾದೇಶಿ ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿರುವ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿಸಿದರು. ಅಲ್ಲದೆ ಹಾಗೆ ಮಾಹಿತಿ ನೀಡಿದ ಮಾಹಿತಿದಾರರ ಹೆಸರನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿರುತ್ತಾರೆ.
233307, 232586, 100, ನತ್ತು 9474290250 ದೂರವಾಣಿ ಸಂಖ್ಯೆಗೆ ಕರೆಮಾಡಿ ಅಥವಾ shoccs.and.nic.in. ಈ ಮೇಲ್ ಮೂಲಕ ಮಾಹಿತಿ ನೀಡಬಹುದಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಂದ ಅಕ್ರಮವಾಗಿ ವಲಸೆ ಬಂದವರನ್ನು ಪತ್ತೆ ಹಚ್ಚಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.
Breaking News
- ಫೋಟೋಗೆ ಅಡ್ಡ ಬಂದಿದ್ದಕ್ಕೆ ಉತ್ತರ ಭಾರತೀಯನ ದೌರ್ಜನ್ಯ ರಕ್ತ ಬರುವಂತೆ ಹಲ್ಲೆ
- ವಿಶ್ವದ ಗಗನಚುಂಬಿ ಕಟ್ಟಡದ ಎತ್ತರ 1 ಕೀ.ಮಿ!
- ಚಾಮುಂಡೇಶ್ವರಿ ಆಶಿರ್ವಾದ ನನ್ನ ಮೇಲೆ ಇದೆ ಸಿದ್ದರಾಮಯ್ಯ
- ಮದನಪಲ್ಲಿ ಜಿಲ್ಲೆ ರಚನೆ ಸದ್ಯಕ್ಕಿಲ್ಲ ಚಂದ್ರಬಾಬು
- ಶ್ರೀನಿವಾಸಪುರ ನೌಕರರ ಸಂಘದ ಮತದಾರ ಪಟ್ಟಿಯಲ್ಲಿ ಅಕ್ರಮ ಅರೋಪ!
- lover Boy ಕಳ್ಳಾಟಕ್ಕೆ ಬೆಸೆತ್ತು ಕಳ್ಳಿ ಹಾಲು ಕುಡಿದ ಯುವತಿ ಆತ್ಮಹತ್ಯೆಗೆ ಯತ್ನ!
- ಶ್ರೀನಿವಾಸಪುರ ಅಪರಿಚಿತ ವಾಹನ ಬಡಿದು ಬೈಕನಲ್ಲಿದ್ದ ತಾಯಿ-ಮಗ ಸಾವು
- ಹರಿಯಾಣದಲ್ಲಿ 200 Days ಮುಖ್ಯಮಂತ್ರಿಯಿಂದ ಬಿಜೆಪಿಗೆ ಹ್ಯಾಟ್ರಿಕ್ ಗೆಲವು!
- ಶ್ರೀನಿವಾಸಪುರ ತಾಡಿಗೋಳ್ RTO ಚೆಕ್ ಪೋಸ್ಟ್ ಲೋಕಾಯುಕ್ತ ದಾಳಿ.
- ಮುತ್ತಕಪಲ್ಲಿ ಪಂಚಾಯಿತಿ ಅಕ್ರಮಗಳ ತನಿಖೆಗೆ ಆಗ್ರಹ
Saturday, October 12