ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಗೆ ಪ್ರಾಂಶುಪಾಲನೊಬ್ಬ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ . ಪ್ರಾಂಶುಪಾಲನ ವಿರುದ್ಧ ಎಫ್ ಐ ಆರ್ ದಾಖಲಾದ ಘಟನೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿರುತ್ತದೆ.
ಈ ಹಿನ್ನಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲ ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹಾಗೂ ಪ್ರಭಾರ ಪ್ರಾಂಶುಪಾಲ ಈಶ್ವರ್ ರೆಡ್ಡಿ ಯನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
2026 ರ ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಸುಮಾರು 2:30ರ ವೇಳೆಗೆ ಶಾಲೆಯ ಮೊದಲನೇ ಮಹಡಿಯಲ್ಲಿರುವ ಪ್ರಥಮ ಚಿಕಿತ್ಸೆ ಕೊಠಡಿಯಲ್ಲಿ ಪ್ರಭಾರ ಪ್ರಾಂಶುಪಾಲರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ನನ್ನ ಖಾಸಗಿ ಅಂಗ ಮುಟ್ಟುತ್ತಾರೆ ಎಂದು ಆರೋಪಿಸಿ ಪತ್ರ ಬರೆದು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದ ಬಾಲಕಿ
ನನಗೆ ಆದಂತೆ ಯಾರಿಗೂ ಆಗಬಾರದು ಪತ್ರದಲ್ಲಿ ಬರೆದುಕೊಂಡಿದ್ದು ವಿದ್ಯಾರ್ಥಿನಿಯ ಆರೋಪವನ್ನು ಪರಿಗಣಿಸಿ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಸೆಪ್ಟೆಂಬರ್ 28 ರಂದು ಪೋಕ್ಸೋ ಕಾಯ್ದೆಯಡಿ ಪ್ರಕರಣ ಸಂಖ್ಯೆ:139/2026 ಪ್ರಕರಣ ದಾಖಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಈ ವೇಳೆ ವಿದ್ಯಾರ್ಥಿನಿ ಮತ್ತು ಶಿಕ್ಷಕರಿಂದ ಮಾಹಿತಿ ಸಂಗ್ರಹಿಸಿ, ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.
ಈ ವರದಿಯ ಆಧಾರದ ಮೇಲೆ, ಕರ್ನಾಟಕ ಸರ್ಕಾರಿ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ-1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ತಿದ್ದುಪಡಿ) ನಿಯಮಗಳು-2025ರ Schedule-III ಅನ್ವಯ ಈಶ್ವರ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳಬಾರದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ.
Trending
- ವಸತಿ ಶಾಲೆ ಪ್ರಾಂಶುಪಾಲನ ಅಸಭ್ಯ ವರ್ತನೆ ವಿದ್ಯಾರ್ಥಿನಿ ಆರೋಪ,ಅಮಾನತು!
- ಪ್ರತಿಷ್ಠಿತ FKCCI ಸಂಸ್ಥೆ ಅಧ್ಯಕ್ಷರಾಗಿ ಸಾಯಿ ರಾಮ್ ಪ್ರಸಾದ್ ಆಯ್ಕೆ
- ಬೆಂಗಳೂರಿಗೂ ಬಂದ ಆನೆ, ವ್ಯಕ್ತಿ ಮೇಲೆ ದಾಳಿ ಸಾವು!
- ಪತ್ರಕರ್ತರಿಗೆ ರೈಲ್ವೆ ಪಾಸ್ ಜಾರಿಗೊಳಿಸಲು ಸಚಿವ ಸೋಮಣ್ಣಗೆ ಪತ್ರಕರ್ತರ ಸಂಘ ಮನವಿ!
- ಶ್ರೀನಿವಾಸಪುರ:ಭಗತ್ ಸಿಂಗ್ ಜಯಂತಿ ಯಲ್ದೂರು ಯುವಕರಿಂದ ದೇಶಭಕ್ತಿ ಓಟ
- ವಿಧ್ವಂಸಕ ಕೃತ್ಯಗಳಿಗೆ ಸಂಚು, ಇಬ್ಬರು ಶಂಕಿತ ಉಗ್ರರ ಬಂಧನ!
- ಪದವೀಧರ ಚುನಾವಣೆ ನೀತಿ ಸಂಹಿತೆ ಪಾಲಿಸಲು DC ಸೂಚನೆ.
- ಚಿರಂಜೀವಿ”ಕಾಕಾ”ಸಿನಿಮಾ ಪಾತ್ರದ ಹೆಸರು”ಕದರಿ ಕಾಳಿದಾಸು”!
Wednesday, September 30



