ಬೆಂಗಳೂರು:ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ದಿಸಿ ಸೋತಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಹೊರಹಾಕಿದೆ. ಕೆಲ ದಿನಗಳ ಹಿಂದೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪ ಹೊತ್ತಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು ಇದನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು.ರಾಜೀವ್ ಗೌಡ ವರ್ತನೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಸುಧಾಕರ್ ಸಹ ಬೇಸರ ವ್ಯಕ್ತಪಡಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ನಮ್ಮ ಪಕ್ಷದವರೇ ಆದರೂ ಇಂತಹ ವರ್ತನೆಯನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ರಾಜೀವ್ ಗೌಡ ಅವರ ಆಡಿಯೋ ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ ಅಧಿಕಾರಿಗಳ ಗೌರವಕ್ಕೆ ಧಕ್ಕೆ ತರುವಂತಾಗಿದೆ. ಅಧಿಕಾರಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜೀವ್ ಗೌಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ರಾಜೀವ್ ಗೌಡ ವರ್ತನೆ ವಿರುದ್ದ ರಾಜ್ಯದ್ಯಂತ ವ್ಯತಿರಕತೆ ವ್ಯಕ್ತವಾದ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಪೋಲಿಸರು ರಾಜೀವ್ ಗೌಡ ಬಂಧನಕ್ಕೆ ಮುಂದಾದ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ರಾಜೀವ್ ಗೌಡ ಅವರಿಗೆ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಅವರು ಹೈಕೋರ್ಟ್ನಲ್ಲಿ ಎಫ್ಐಆರ್ (FIR) ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜೀವ್ ಗೌಡ ಅವರ ಅರ್ಜಿಯನ್ನು ವಜಾಗೊಳಿಸಿದಲ್ಲದೆ ರಾಜೀವ್ ಗೌಡ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸಡಿಲವಾದ ನಾಲಿಗೆ ಎಲ್ಲವನ್ನೂ ನಾಶಮಾಡಬಹುದು ಎಂದು ಛೀಮಾರಿ ಹಾಕಿದೆ.ಸಾರ್ವಜನಿಕ ಸೇವಕರಿಗೆ ದರ್ಪ ತೋರಿಸುವುದು ಮತ್ತು ಬೆದರಿಕೆ ಹಾಕುವುದು ಗಂಭೀರ ಅಪರಾಧ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೆ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಬೆಂಗಳೂರು, ಕೋಲಾರ ಮತ್ತು ತಮಿಳುನಾಡಿನ ವಿವಿಧೆಡೆ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



