ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಪ್ರಕಟಿಸಿತ್ತಾದರೂ ಕೊನೆ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು 19 ಸಚಿವರಿಗೆ ಮಾತ್ರ ಪ್ರತಿಜ್ಞಾವಿಧಿ ಬೋಧಿಸಿದರು. ಮಂತ್ರಿ ಸ್ಥಾನ ಪಡೆದವರಲ್ಲಿ ಡಾ. ಅಜಯ್ ಸಿಂಗ್ ಎಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಖಾನ್ ಅವರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಅವಿಭಜಿತ ಕೋಲಾರಕ್ಕೆ ಸಿಗದ ಅವಕಾಶ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆಯದಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಎರಡೂ ಜಿಲ್ಲೆಗಳಿಂದ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದರೂ, ಅಂತಿಮ ಪಟ್ಟಿಯಲ್ಲಿ ಯಾರಿಗೂ ಅವಕಾಶ ಸಿಗಲಿಲ್ಲ. ಇದರಿಂದ ಎರಡೂ ಜಿಲ್ಲೆಗಳ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ನಿರಾಸೆ ವ್ಯಕ್ತವಾಗಿದೆ.ಕೋಲಾರ ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು, ಸದಸ್ಯರಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೂವರು, ಇಬ್ಬರು ವಿಧಾನಪರಿಷತ್ ಸದಸ್ಯರು ಇದ್ದು ಒಬ್ಬರು ಸಹ ಸದಸ್ಯರಿದ್ದರು ಯಾರಿಗೂ ಅವಕಾಶ ಸಿಗದೆ ಇರುವ ಬಗ್ಗೆ ಶಾಸಕರಲ್ಲಿ ನಿರಾಸೆ ಮೂಡಿಸಿದೆ.ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಮರ್ಪಕ ಸಚಿವ ಸ್ಥಾನ ನೀಡದಿರುವುದು ಪ್ರಾದೇಶಿಕ ಸಮತೋಲನದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಶಾಸಕ ನಾರಯಣಸ್ವಾಮಿ ಅಸಮಧಾನ
ಬಂಗಾರಪೇಟೆ ಶಾಸಕ ನಾರಯಣಸ್ವಾಮಿ ಹೆಸರು ಮುಂಚೂಣಿಯಲ್ಲಿ ಇತ್ತಾದರು ಅವಕಾಶ ಸಿಗದೆ ಇರುವುದಕ್ಕೆ ತೀವ್ರ ಅಸಮಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯನವರ ಅವಧಿಯಲ್ಲೂ ಸ್ಥಾನ ಸಿಗಲಿಲ್ಲ ಶಿವಕುಮಾರ್ ನೇತೃತ್ವದಲ್ಲೂ ನನಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಇದಕ್ಕೆ ನಮ್ಮದೆ ಜಿಲ್ಲೆಯ ಕೆಲವರು ಕಾರಣ ಎಂದು ದೂರಿದ್ದಾರೆ.
Trending
- ಶಿವಕುಮಾರ್ ಸಂಪುಟ ವಿಸ್ತರಣೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಗದ ಮಂತ್ರಿ ಸ್ಥಾನ!
- ಶ್ರೀನಿವಾಸಪುರ:ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಪಟ್ಟಣದ ರಸ್ತೆ ವೃತ್ತಗಳು!
- history created:ವಂದೇ ಭಾರತ್ ರೈಲಿನಲ್ಲಿ ಜೀವಂತ ಹೃದಯ ರವಾನೆ!
- ತಿರುಮಲ ನಡಿಗೆ ಮಾರ್ಗದಲ್ಲಿ ಅಂಜನೇಯ ವಿಗ್ರಹ ಕದ್ದು ಸಿಕ್ಕಿಬಿದ್ದ ಖದೀಮ!
- ಪ್ರೇರಣಾತ್ಮಕ ಕಥೆ:ದಿನಗೂಲಿ ನೌಕರಿ ಮಾಡುತ್ತ PHD ಪದವಿ ಪಡೆದ ಮಹಿಳೆ!
- viral video ಬೆಟ್ಟದ ತುದಿಯಲ್ಲಿ ಬೈಕ್ ಸಾಹಸ ಕೂದಲೆಳೆ ಅಂತರದಲ್ಲಿ ಯುವಕ ಬಚಾವ್!
- ಚಿಂತಾಮಣಿಯಲ್ಲಿ ಪಾಂಡುರಂಗ ವಿಠಲ ಮಂದಿರ ಲೋಕಾರ್ಪಣೆ
- ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಣೆ!
Monday, August 3



