ನ್ಯೂಜ್ ಡೆಸ್ಕ್:ನಿರಂತರವಾಗಿ ಪರೀಕ್ಷೆ ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನಲೆಯಲ್ಲಿ 23 ವರ್ಷದ ಬಿ.ಟೆಕ್ ಚಿನ್ನದ ಪದಕ ವಿಜೇತ ಯುವಕ ತೀವ್ರ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಕಾನ್ಪುರದ ಗುಜೈನಿಯಲ್ಲಿ ದುರಂತ ಘಟನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿಹಾರದ ಬಕ್ಸಾರ್ನ ಆನಂದ್ ಕುಮಾರ್ ಎಂದಿರುತ್ತಾರೆ.
ಬಿಟೆಕ್ ಚಿನ್ನದ ಪದಕ ಪಡೆದಿದ್ದ
2024 ರಲ್ಲಿ ಕಾನ್ಪುರದ ಪ್ರಮುಖ PSIT ಎಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿಯಲ್ಲಿ ಉತ್ತರ ಪ್ರದೇಶಕ್ಕೆ ಮೂರನೆ ರ್ಯಾಂಕ್ ವಿಜೇತನಾಗಿ ಚಿನ್ನದ ಪದಕ ಪಡೆದು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಸ್ಥನಾಗಿದ್ದ ಆದರೂ ನಿರಂತರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ 50 ಕ್ಕೂ ಹೆಚ್ಚು ಬಾರಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ಹಾಜರಾದರೂ ಫಲಿತಾಂಶ ಸಿಗದ ಹಿನ್ನಲೆಯಲ್ಲಿ ತೀವ್ರ ಆಘಾತಕ್ಕೆ ಒಳಾಗದ ಯುವಕ ಗುಜೈನಿಯಲ್ಲಿರುವ ತಮ್ಮ ತಂದೆಯ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಪ್ಪನಿಗೆ ಪದೇ ಪದೇ ಕ್ಷಮಿಸಿ ಎಂದು ಕೇಳಿದ್ದಾನೆ!
ಸಾಯುವ ಮುನ್ನ ಯುವಕ ಬರೆದಿಟ್ಟಿರುವ ಆತ್ಮಹತ್ಯೆ ಪತ್ರದಲ್ಲಿ ತಂದೆಗೆ ಪದೇ ಪದೇ ಕ್ಷಮೆಯಾಚಿಸುತ್ತಾ, “ಕ್ಷಮಿಸಿ ಅಪ್ಪ ನಾನು ಸರ್ಕಾರಿ ಕೆಲಸಕ್ಕಾಗಿ 50 ಬಾರಿ ಪ್ರಯತ್ನಿಸಿದೆ. ಆದರೆ ನಾನು ಯಶಸ್ವಿಯಾಗಲು ಸಾಧ್ಯವಾಗಲಿಲ್ಲ ನಾನು ಸೋತು ಹೋದೆ ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಬರೆದಂತ ಪತ್ರ ಎಂತವರನ್ನು ಕರಳು ಕಿವಿಚಿ,ಕಣ್ಣೀರು ತರಿಸುವಂತಿದೆ ಎನ್ನುತ್ತಾರೆ.
Trending
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
- ತೇಜೋವದೆ ಆರೋಪ ಮಾಲೂರು ಚಲಪತಿ ವಿರುದ್ದ ವೆಂಕಟಶಿವಾರೆಡ್ಡಿ ದೂರು!
Tuesday, July 21



