ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದ ನರಸಿಂಹಪಾಳ್ಯದಲ್ಲಿರುವ ಶ್ರೀವರಸಿದ್ದಿ ವಿನಾಯಕ ಹಾಗು ಶ್ರೀಮಹಾಲಕ್ಷ್ಮಿ ಸಮೇತ ಶ್ರೀ ಉಗ್ರನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಲೋಕ ಕಲ್ಯಾಣಾರ್ಥವಾಗಿ ಸೌರಮಾನ ನೃಸಿಂಹ ಜಯಂತಿ ಪ್ರಯುಕ್ತ ಶ್ರೀ ಶ್ರೀದೇವಿ ಹಾಗು ಭೂದೇವಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಗದೊಡೆಯ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶ್ರೀನಿವಾಸ ಕಲ್ಯಾಣೋತ್ಸವ ಮಾಡುವುದರಿಂದ ಸಮಸ್ತ್ತಲೋಕಕ್ಕೆ ಸುಖ,ಶಾಂತಿ ನೆಮ್ಮದಿ ಪ್ರಾಪ್ತಿಯಾಗಲಿದೆ ಎಂದು ಕಲ್ಯಾಣೋತ್ಸವದ ಧಾರ್ಮಿಕ ವಿಧಿ ನೆರವೇರಿಸಿದ ಪುರೋಹಿತ ಚಂಟಿಸುದರ್ಶನ್ ಹೇಳಿದರು.ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀನಿವಾಸ ಕಲ್ಯಾಣೋತ್ಸವ ವೀಕ್ಷಿಸಿ ಕೃತಾರ್ಥರಾದರು.
ಅನ್ನ ಸಂತರ್ಪಣೆ: ಶ್ರೀನಿವಾಸ ಕಲ್ಯಾಣೋತ್ಸವ ಅಂಗವಾಗಿ ದೇವರ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದ ಭಕ್ತರಿಗೆ ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಪ್ರಮುಖ ರೂವಾರಿಗಳಾದ ವೇದಪಂಡಿತ ಕಾಡುದೇವಂಡಹಳ್ಳಿ ಗೋಪಿನಾಥರಾವ್ ಕುಟುಂಬದ ಸದಸ್ಯರು,ಧಾರ್ಮಿಕ ದತ್ತಿ ಇಲಾಖೆ ಆಗಮ ಪಂಡಿತ ಸುಬ್ರಮಣ್ಯಂ,ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಜಿಲ್ಲಾ ನಿರ್ದೇಶಕ ಅರುಣ್ ಕುಮಾರ್,ಬ್ರಾಹ್ಮಣ ಸಮುದಾಯದ ಮುಖಂಡ ಗೋಫಿನಾಥರಾವ್,ಆಶ್ರಯ ಯೋಜನೆ ಮಾಜಿ ನಿರ್ದೇಶಕ ಹಳೇಪೆಟೆನಾರಯಣಸ್ವಾಮಿ,ಮುನಿರೆಡ್ಡಿ, ಜೆಸಿಬಿ ಮಂಜು,ಅಶೋಕ್ ರೆಡ್ದಿ,ಪುರಸಭೆ ಮುನಿಸ್ವಾಮಿ,ಸತ್ಸಂಗ ಬಳಗದ ಬ್ಯಾಂಕ್ ಸತ್ಯಮೂರ್ತಿ,ಮಂಗಳಾಸತ್ಯಮೂರ್ತಿ ಹಾಗು ಮುಂತಾದವರು ಉಪಸ್ಥಿತರಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



