ಶ್ರೀನಿವಾಸಪುರ:ಸರ್ಕಾರಿ ಶಾಲೆ ಜಮೀನು ಒತ್ತುವರಿ ವಿಚಾರದಲ್ಲಿ ಗ್ರಾಮದ ಎರಡು ಗುಂಪುಗಳ ನಡುವೆ ಹೊಡೆದಾಟಗಳಾಗಿರುವ ಘಟನೆ ಇಂದು ಗೌವನಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ.
ಪಾಪಿಶೆಟ್ಟಿಪಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಜಮೀನು ಒತ್ತುವರಿಯಾಗಿದ್ದು ಈ ಸಂಬಂದ ಶಾಲೆಯ ಮುಖ್ಯೋಪಾದ್ಯಾಯ ಎಲ್.ಶ್ರೀರಾಮ್ ಅವರು ಗೌವನಪಲ್ಲಿ ಗ್ರಾಮಪಂಚಾಯಿತಿಗೆ ಅರ್ಜಿ ನೀಡಿ ಶಾಲೆ ಜಮೀನು ಅಳತೆ ಮಾಡಿಕೊಡುವಂತೆ ಮನವಿ ಮಾಡಿದ್ದರು ಅದರಂತೆ ಇಂದು ಗೌವನಪಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌಸ್ ಸಾಬ್ ಮತ್ತು ಸಿಬ್ಬಂದಿ ಪಾಪಿಶೆಟ್ಟಿಪಲ್ಲಿ ಗ್ರಾಮಕ್ಕೆ ತೆರಳಿ ಶಾಲಾ ಜಮೀನು ಅಳತೆ ಮಾಡಲು ತಯಾರಿ ನಡೆಸುತ್ತಿದ್ದಂತೆ ಗ್ರಾಮದಲ್ಲಿ ಜಮೀನು ವಿಚಾರವಾಗಿ ಪರ-ವಿರೋಧವಾಗಿ ಎರಡು ಗುಂಪುಗಳು ಶಾಲೆ ಬಳಿ ಜಮಾವಣೆಯಾಗಿ ಪರಸ್ಪರ ಆರೋಪ ಪ್ರತ್ಯಾರೋಗಳನ್ನು ಮಾಡಿಕೊಳ್ಳುತ್ತಿದ್ದಂತೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿ ಅಳತೆ ಮಾಡದೆ ವಾಪಸ್ಸು ಬಂದಿರುತ್ತಾರೆ ನಂತರದಲ್ಲಿ ಗ್ರಾಮದ ಸರ್ಕಾರಿ ಶಾಲೆ ಜಮೀನು ಅನ್ನು ಶಾಲೆ ಆವರಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀನಿವಾಸ್ ಅನ್ನುವರು ಒತ್ತುವರಿ ಮಾಡಿದ್ದಾರೆ ಜಮೀನು ಒತ್ತುವರಿ ವಿಚಾರ ಇತ್ಯರ್ಥ ಆಗುವವರಿಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡುತ್ತಿರುವ ಶಾಲಾ ಕಾಂಪೌಂಡ್ ಅನ್ನು ನಿರ್ಮಾಣ ಮಾಡಲು ಅವಕಾಶ ನೀಡಬಾರದು ಎಂದು ಶಾಲೆಯ ಹಳೇಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ ಶಾಲಾ ಜಮೀನು ಒತ್ತುವರಿ ವಿಚಾರ ಗ್ರಾದಲ್ಲಿ ರಾಜಕೀಯ ತಿರವು ಪಡೆದುಕೊಂಡಿದೆ ಗ್ರಾಮದಲ್ಲಿನ ಕಾಂಗ್ರೇಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೊಲು, ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎರಡು ಪಕ್ಷಗಳ ಕಾರ್ಯಕರ್ತರಿಗೆ ಗಾಯಗಳಾಗಿದ್ದು ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿಸ್ಥೆ ಕೊಡಿಸಿ ನಂತರ ಗಾಯಳುಗಳನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು ತೀವ್ರವಾಗಿ ಗಾಯಗೊಂಡಿರುವ ನಾಗರಾಜ ಅನ್ನುವರನ್ನು ಕೋಲಾರದ ಆಸ್ಪತ್ರೆಗೆ ಕರೆದೊಯಿದಿದ್ದಾರೆ.
ಶ್ರೀನಿವಾಸ್ ಎಂಬುವರು ಶಾಲಾ ಜಮೀನು ಆರೋಪ ಇದ್ದು ಆತುರ ಆತುರವಾಗಿ ನರೇಗಾ ಯೋಜನೆಯಲ್ಲಿ ಅಕ್ರಮವಾಗಿ ಶಾಲಾ ಕಾಂಪೌಂಡ್ ನಿರ್ಮಾಣ ಮಾಡುವ ಮೂಲಕ ಒತ್ತುವರಿಯನ್ನು ಸಕ್ರಮ ಮಾಡಲು ಮುಂದಾಗಿದ್ದು ಇದಕ್ಕೆ ಗ್ರಾಮಸ್ಥರು ವಿರೋಧಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28