ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡೆದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ನಡೆದಿದೆ.
ಬೆಂಕಿ ಅವಘಡಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಸದಸ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂಧ್ರಪ್ರದೇಶದ ಕಡಪದ ಕುಟುಂಬವೊಂದು ಕರ್ನಾಟಕ ನೊಂದಣಿ ಹೊಂದಿರುವ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಕಾರಿನ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿದೆ ರಸ್ತೆ ಬದಿಯಲ್ಲಿನ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡದಿದ್ದು ಕಾರಿನ ಇಂಜಿನ್ ನಲ್ಲಿ ಬೆಂಕಿಹೊತ್ತಿಕೊಂಡಿದೆ ತಕ್ಷಣ ಕಾರಿನಲಿದ್ದ ಕುಟುಂಬಸ್ಥರು ಕಾರಿನಿಂದ ಇಳಿದು ಪ್ರಾಣಗಳನ್ನು ಉಳಿಸಿಕೊಂಡಿದ್ದಾರೆ.
ಕಾರು ಸಿಎನ್ಜಿ-ಪೆಟ್ರೋಲ್ ಆದ ಕಾರಣ ಬೆಂಕಿ ನಂದಿಸಲು ಸಾರ್ವಜನಿಕರು ಹಿಂದೇಟು ಹಾಕಿದ ಹಾಕಿದ ಕಾರಣ ಬೆಂಕಿ ಸಿ.ಎನ್.ಜಿ ಟ್ಯಾಂಕಿಗೆ ಬೆಂಕಿ ತಗುಲಿದರೆ ದೊಡ್ಡ ಮಟ್ಟದ ಅನಾಹುತ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಸಂಪರ್ಕವನ್ನು ರಾಯಲ್ಪಾಡು ಪೊಲೀಸರು ಬಂದ್ ಮಾಡಿಸಿದ್ದರು. ಶ್ರೀನಿವಾಸಪುರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ ನಂತರ ವಾಹನ ಸಂಚಾರಕ್ಕೆ ಪೋಲಿಸರು ಅನುಮತಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



