ಬೆಂಗಳೂರು: ಕನ್ನಡದ ಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಪುಣ್ಯಭೂಮಿ ಮತ್ತು ಸ್ಮಾರಕಕ್ಕೆ ಸಂಬಂಧಿಸಿದಂತೆ ವಿಷ್ಣುವರ್ಧನ್ ಅಭಿಮಾನಿಗಳು ಅನೇಕ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಲೆ ಬಂದಿದ್ದಾರೆ ಆದರೂ ಸರ್ಕಾರ ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ಧೋರಣೆ ತೊರುತ್ತಿದೆ ಇದನ್ನು ವಿರೋಧಿಸಿ ವಿಷ್ಣು ಅಭಿಮಾನಿಗಳು ಮತ್ತೆ ಗರಂ ಆಗಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮೈಸೂರಿಗೆ ಸ್ಥಳಾಂತರ ಮಾಡಿದ್ದು ಗೊತ್ತೇ ಇದೆ. ವಿಷ್ಣು ಅಂತ್ಯಸಂಸ್ಕಾರ ಆಗಿರುವ ಅಭಿಮಾನ್ ಸ್ಟುಡಿಯೋದ ಸ್ಥಳದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಅವರ ಅಭಿಮಾನಿಗಳು ಪಟ್ಟು ಹಿಡಿದು ಕುಳಿತಿದ್ದಾರೆ. ಅದರಂತೆ, ಪ್ರತಿ ವರ್ಷವೂ ‘ಸಾಹಸ ಸಿಂಹ’ ಅವರ ಹುಟ್ಟುಹಬ್ಬ ಹಾಗೂ ಪುಣ್ಯಸ್ಮರಣೆಯನ್ನು ಅಭಿಮಾನ್ ಸ್ಟುಡಿಯೋದ ಡಾ. ವಿಷ್ಣು ಪುಣ್ಯಭೂಮಿಯಲ್ಲಿಯೇ ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ.
ಆದರೆ ಇತ್ತಿಚಿಗೆ ಅಭಿಮಾನ್ ಸ್ಟುಡಿಯೋದ ಮಾಲಿಕರು ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರ ನಡೆದ ಅಭಿಮಾನ್ ಸ್ಟುಡಿಯೋದ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧಗಳನ್ನು ಹೇರುತ್ತಿದ್ದಾರೆ ಸ್ಟುಡಿಯೋದ ಮಾಲೀಕರ ವರ್ತನೆಯಿಂದ ಕಂಗಾಲಾಗಿರುವ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ,ಪುಣ್ಯಭೂಮಿ ಜಾಗದಲ್ಲಿ ಅಭಿಮಾನ್ ಸ್ಟುಡಿಯೋದ ಮಾಲಿಕರ ವರ್ತನೆ ಕುರಿತಂತೆ ಅಭಿಮಾನಿಗಳು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಪುಣ್ಯಭೂಮಿ ಜಾಗಕ್ಕೆ ಅಭಿಮಾನಿಗಳೆ ಹಣ ನೀಡುತ್ತಾರೆ
ವಿಷ್ಣುವರ್ಧನ್ ಅವರ ಸ್ಮಾರಕ ಮತ್ತು ಪುಣ್ಯಭೂಮಿ ಎರಡು ಕಡೆ ಮಾಡಲು ರಾಜ್ಯ ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿ ಪಡಿಸಲು ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುತ್ತೇವೆ ಎಂದು ಸರ್ಕಾರಕ್ಕೆ ವಿಷ್ಣು ಫ್ಯಾನ್ಸ್ ಹೇಳಿದ್ದಾರೆ ಹಾಗಿದ್ದರೂ ಕೂಡ ಸರ್ಕಾರದ ಕಡೆಯಿಂದ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ ಎಂದು ಅಭಿಮಾನಿಗಳು ‘ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟ’ದ ಹೆಸರಿನಲ್ಲಿ ಡಾ. ವಿಷ್ಣುವರ್ಧನ್ ಸೇನಾ ಸಮಿತಿ ಪ್ರಮುಖ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಡಿಸೆಂಬರ್ 17 ಭಾನುವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಡಿಸೆಂಬರ್ 17ರಂದು ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು.ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ ಆರರ ತನಕ ಪ್ರತಿಭಟನೆ ನಡೆಯಲಿದ್ದು, ರಾಜ್ಯಾದ್ಯಂತ ಇರುವಂತ ವಿಷ್ಣುವರ್ಧನ್ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಲಿದ್ದು ಇವರೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳು, ವಿವಿಧ ಕಲಾವಿದರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ. ಅಂದಾಜು 50 ಸಾವಿರ ಜನರು ಸೇರುವ ಸಾಧ್ಯತೆ ಇದೆ ಎಂದು ವೀರಕಪುತ್ರ ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- ಫೋಟೋಗೆ ಅಡ್ಡ ಬಂದಿದ್ದಕ್ಕೆ ಉತ್ತರ ಭಾರತೀಯನ ದೌರ್ಜನ್ಯ ರಕ್ತ ಬರುವಂತೆ ಹಲ್ಲೆ
- ವಿಶ್ವದ ಗಗನಚುಂಬಿ ಕಟ್ಟಡದ ಎತ್ತರ 1 ಕೀ.ಮಿ!
- ಚಾಮುಂಡೇಶ್ವರಿ ಆಶಿರ್ವಾದ ನನ್ನ ಮೇಲೆ ಇದೆ ಸಿದ್ದರಾಮಯ್ಯ
- ಮದನಪಲ್ಲಿ ಜಿಲ್ಲೆ ರಚನೆ ಸದ್ಯಕ್ಕಿಲ್ಲ ಚಂದ್ರಬಾಬು
- ಶ್ರೀನಿವಾಸಪುರ ನೌಕರರ ಸಂಘದ ಮತದಾರ ಪಟ್ಟಿಯಲ್ಲಿ ಅಕ್ರಮ ಅರೋಪ!
- lover Boy ಕಳ್ಳಾಟಕ್ಕೆ ಬೆಸೆತ್ತು ಕಳ್ಳಿ ಹಾಲು ಕುಡಿದ ಯುವತಿ ಆತ್ಮಹತ್ಯೆಗೆ ಯತ್ನ!
- ಶ್ರೀನಿವಾಸಪುರ ಅಪರಿಚಿತ ವಾಹನ ಬಡಿದು ಬೈಕನಲ್ಲಿದ್ದ ತಾಯಿ-ಮಗ ಸಾವು
- ಹರಿಯಾಣದಲ್ಲಿ 200 Days ಮುಖ್ಯಮಂತ್ರಿಯಿಂದ ಬಿಜೆಪಿಗೆ ಹ್ಯಾಟ್ರಿಕ್ ಗೆಲವು!
- ಶ್ರೀನಿವಾಸಪುರ ತಾಡಿಗೋಳ್ RTO ಚೆಕ್ ಪೋಸ್ಟ್ ಲೋಕಾಯುಕ್ತ ದಾಳಿ.
- ಮುತ್ತಕಪಲ್ಲಿ ಪಂಚಾಯಿತಿ ಅಕ್ರಮಗಳ ತನಿಖೆಗೆ ಆಗ್ರಹ
Saturday, October 12