ಶ್ರೀನಿವಾಸಪುರ:ತಾಲ್ಲೂಕಿನ ದೇವಲಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಕಂಪ್ಯೂಟರ್ ತರಬೇತಿ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕಂಪ್ಯೂಟರ್ ಕೋಠಡಿಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದ್ದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ.
ದೇವಲಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕ ವಿಜಯ್ ಕುಮಾರ್ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ಹೋರಹಾಕಿದ್ದಾರೆ.
ಇತ್ತಿಚಿಕೆ ಶಿಕ್ಷಕನ ಕೀಚಕ ವರ್ತನೆ ಅತಿಯಾದ ಹಿನ್ನಲೆಯಲ್ಲಿ ಮಕ್ಕಳು ಶಾಲೆಯಲ್ಲಿ ನಡೆಯುತ್ತಿದ್ದ ಘಟನೆಗಳ ಕುರಿತಾಗಿ ಪೋಷಕರೊಂದಿಗೆ ಭಯದಿಂದ ಹಂಚಿಕೊಂಡ ಹಿನ್ನಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರ ಹಾಗು ಪೋಷಕರ ಆರೋಪದ ಪ್ರಕಾರ ಶಿಕ್ಷಕನ ಅಸಭ್ಯ ವರ್ತನೆ ಮೊದಲಿನಿಂದಲೂ ಇದ್ದು ಮಕ್ಕಳು ಮನೆಯಲ್ಲಿ ಹೇಳಲು ಹೆದರಿದ ಹಿನ್ನಲೆಯಲ್ಲಿ ವಿಷಯ ಗೊತ್ತಾಗಿರಲಿಲ್ಲ ಎನ್ನುತ್ತಾರೆ ಇತ್ತೀಚೆಗೆ ಪೋಷಕರಿಗೆ ಮಾಹಿತಿ ನೀಡಿದ ಬಳಿಕ ಎಂದು ಪೋಷಕರು ಶಿಕ್ಷಕನ ವಿರುದ್ದ ತಿರುಗಿ ಬಿದಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ, ಶಿಕ್ಷಕ ವಿಜಯ್ ಕುಮಾರ್ ಇದೇ ಊರಿನಲ್ಲಿ ವಿವಾಹವಾಗಿದ್ದು, ರೋಣೂರು ಗ್ರಾಮದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು ಎನ್ನಲಾಗಿದೆ.
ಶಿಕ್ಷಕ ವಿಜಯ್ ಕುಮಾರ್ ನನ್ನು ಕೂಡಲೇ ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
Trending
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
- ಶ್ರೀನಿವಾಸಪುರ:ನಾರಮಾಕಲಹಳ್ಳಿ ನೀರಿನ ಸಮಸ್ಯೆ ಗ್ರಾಮಸ್ಥರ ಅಳಲು!
- ಜನಸಾಮನ್ಯರ ಕಣ್ಣೀರಿಗೆ ಕಾರಣವಾಗುತ್ತಿದೆ ಈರುಳ್ಳಿ ಸಕ್ಕರೆ ಬೆಲೆ!
Thursday, September 3



