ಚಿಂತಾಮಣಿ:ವಿಚ್ಛೇದಿತ ಮಹಿಳೆಯರನ್ನು ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ್ದ ಆರೋಪಿ ಗಿರೀಶ್ ನೇಣಿಗೆ ಶರಣಾಗಿದ್ದಾನೆ. ಚಿಂತಾಮಣಿ ನಗರದ ಕನ್ನಂಪಲ್ಲಿಯಲ್ಲಿದ್ದ ಆರೋಪಿ ಮನೆಯಲ್ಲಿ ನೇಣು ಬಿಗಿದು ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಆರೋಪಿ ವಂಚನೆಗೆ ಒಳಗಾಗಿದ್ದ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರು ದಾಖಲಾಗುತ್ತಿದ್ದಂತೆ ಗಿರೀಶ್ ನೇಣಿಗೆ ಶರಣಾಗಿರುವ ಕುರಿತು ಶಂಕೆ ವ್ಯಕ್ತಪಡಿಸಲಾಗಿದೆ.ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ.
ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ಈತ ಒಬ್ಬಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದು ಫೇಸ್ಬುಕ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡು,ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ Fraud promising marriage ಅವರನ್ನು ಪುಸಲಾಯಿಸಿ ಅದರಲ್ಲೂ ಕೆಲವರನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು,ಅಂತಹ ವಿಡಿಯೋಗಳನ್ನು ತೊರಿಸಿ ಹೆದರಿಸುತ್ತ ಒಡವೆ ಹಾಗು ಹಣಕ್ಕಾಗಿ ಪೀಡಿಸುತ್ತ ಇದ್ದನೆಂದು ಹೇಳಲಾಗಿದೆ
ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ, ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿದ್ದು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯರು ಗಿರೀಶ್ ವಿರುದ್ಧ ಚಿಂತಾಮಣಿ ನಗರಠಾಣೆಗೆ ದೂರು ನೀಡಿದ್ದರು.
ಫೇಸ್ ಬುಕ್ ಜಾಲತಾಣಗಳಲ್ಲಿ ಗಾಳ
ಬೆಂಗಳೂರಿನ ಒಂಟಿ ಮಹಿಳೆಯಿಂದ 25 ಲಕ್ಷ ಹಣ ಪಡೆದು ವಂಚಿಸಿದ್ದ, ಚಿಕ್ಕಬಳ್ಳಾಪುರ ಮೂಲದ ಸರ್ಕಾರಿ ಉದ್ಯೋಗಿ ಮಹಿಳೆ ಬಳಿ 5 ಲಕ್ಷ ಹಣ ಪಡೆದು ಸಾಲದು ಎಂದು ಕಿರುಕುಳ ನೀಡುತ್ತಿದ್ದ, ಕೆ.ಆರ್.ಪುರಂ ಮೂಲದ ವಿವಾಹಿತ ಮಹಿಳೆಯ ಬಳೆ ಮಾಂಗಲ್ಯ ಚೈನ್, ಕಿವಿಯೋಲೆ ಸೇರಿದಂತೆ 40 ಗ್ರಾಮ್ ಚಿನ್ನ ತೆಗೆದುಕೊಂಡು ಮೋಸ ಮಾಡಿದ್ದಲ್ಲದೆ ಹೋಸಕೋಟೆ ನಂದಗುಡಿಯ ಶ್ರೀಮಂತ ಯುವತಿಯನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಹಣಕ್ಕಾಗಿ ಪೀಡಿಸುತ್ತ ಇದ್ದನಂತೆ, ಬಂಗಾರಪೇಟೆ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳು ಗಿರೀಶ್ ಮೇಲೆ ಇದೆ ಎನ್ನುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



