ಬೆಂಗಳೂರು:ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ಮನವಿಮಾಡಿತ್ತು ಈ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿ ಮಾನವೀಯತೆ ಮೆರೆದಿದ್ದಾರೆ.
ಪ್ರಜಾವಾಣಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ವೀರೇಶ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬ ತೀವ್ರ ಸಂಕಷ್ಟದಲ್ಲಿದ್ದು ಈ ಬಗ್ಗೆ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ವಿಚಾರ ಮುಟ್ಟಿಸಿ ನಂತರ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಿದ್ದರು.
ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಮಂಜೂರು ಮಾಡಿದ್ದಾರೆ.ಪರಿಹಾರ ಮಂಜೂರು ಮಾಡಿರುವ ಸಿಎಂ ಸಿದ್ದರಾಮಯ್ಯ ಮತ್ತು ಈ ವಿಚಾರದಲ್ಲಿ ಸಹಕರಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



