ನ್ಯೂಜ್ ಡೆಸ್ಕ್:ನಿಮಗಾಗಿ ಬಾಗಿಲು ತೆರೆದಿದೆ ಎಂಬುವುದರ ಬಗ್ಗೆ ಯೋಚಿಸಿ ಎಂದು ಜನತಾದಳ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ 2018ರ ಚುನಾವಣೋತ್ತರ ಮೈತ್ರಿಯನ್ನು ಅವರು ಉಲ್ಲೇಖಿಸಿ ಮಾತನಾಡಿ ಹೇಳಿದ್ದಾರೆ.
ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಮಾತ್ರ ನಾಯಕನಲ್ಲ;
ಜನತಾದಳ ಕಾರ್ಯಕರ್ತರಿಗೆ ಹೇಳುತ್ತೇನೆ ನಿಮಗೂ ಬಾಗಿಲು ತೆರೆದಿದೆ ಇದನ್ನು ಹೇಗೆ ಬಳಸಿಕೊಳ್ಳಬೇಕೆಂದು ಯೋಚಿಸಿ’ ಎಂದು ಶಿವಕುಮಾರ್ ತಮ್ಮ ತವರು ಕ್ಷೇತ್ರವಾದ ಕನಕಪುರದ ಹಾರೋಹಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಜೆಡಿಎಸ್ ಅನಿತಾಕುಮಾರಸ್ವಾಮಿ ಅವರ ಗೆಲುವಿಗೆ ಸಹಕಾರ ನೀಡಿದ್ದೇವೆ.
2018ರಲ್ಲಿ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಸ್ಥಾನದಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಸಹಾಯ ಮಾಡಿದೆ ಎಂದು ಮುಖ್ಯಮಂತ್ರಿ ಶಿವಕುಮಾರ್ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
ಕುಮಾರಸ್ವಾಮಿ ಗೆಲ್ಲಲು ಸಹಾಯ ಮಾಡಿದ್ದೇವೆ. ಅನಿತಾ ಕುಮಾರಸ್ವಾಮಿ ಅವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದುಕೊಂಡಿದ್ದರು.ಆಗ ಕಾಂಗ್ರೆಸ್ 78 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲವು ಸಾಧಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಒಟ್ಟು ಸಂಖ್ಯೆಯನ್ನು 115ಕ್ಕೆ ಹೆಚ್ಚಿಸಿತು.ನಾನು ಈಗ ಆ ವಿಷಯಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ದ್ವೇಷದ ರಾಜಕೀಯ ಬೇಡ
ಕ್ಷೇತ್ರದಲ್ಲಿ ಎಲ್ಲರನ್ನೂ ಒಟ್ಟಾಗಿ ಹೋಗೋಣ ಲೋಕಸಭೆ ಚುನಾವಣೆಯಲ್ಲಿ ನಮಗೆ ಬೆಂಬಲ ಕೊಡಲಿಲ್ಲ ಎಂದು ಯಾರನ್ನು ದೂಷಣೆ ಮಾಡುವುದಿಲ್ಲ. ಎಲ್ಲರನ್ನೂ ಸಮಾನವಾಗಿ ಕಾಣಬೇಕಿದೆ. ಏನೋ ಒಮ್ಮೆ ಹೆಚ್ಚು ಕಮ್ಮಿ ಆಗಿ ತಪ್ಪಾಗಿರಬಹುದು ಅದನ್ನು ಕ್ಷಮಿಸಿ, ನನ್ನನ್ನು ಯಾವ ರೀತಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ್ದೀರೋ ಅದೇ ರೀತಿ ನಮ್ಮವರನ್ನು ಮುಂದೆಯೂ ಬೆಂಬಲಿಸಿ. ಎಲ್ಲಾರೂ ಒಂದಾಗಿ ಹೋಗೋಣ. ನಮ್ಮ ಮುಖಂಡರು ಯಾರ ವಿರುದ್ಧವೂ ದ್ವೇಷ ಸಾಧಿಸಬಾರದು. ಅವರ ಮನಪರಿವರ್ತನೆ ಆಗಲಿ ಎಂದು ಪ್ರಾರ್ಥಿಸೋಣ ಎಂದರು.
ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದು ನನಗೆ ಅಧಿಕಾರ ಕೊಟ್ಟಿದ್ದಾರೆ. ನಾನು ಹಾಗೂ ಸಿದ್ದರಾಮಯ್ಯ ಸೇರಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಕಾಂಗ್ರೆಸ್ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದರು.
ಜಾತಿ, ಧರ್ಮ ಬೇಧ ಭಾವದ ಮೇಲೆ ನನಗೆ ನಂಬಿಕೆ ಇಲ್ಲ. ಕುವೆಂಪು ಅವರು ಹೇಳಿರುವಂತೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಬೇಕು.ಎಲ್ಲ ಸಮುದಾಯದವರನ್ನು ನಾನು ನನ್ನ ಸಹೋದರರು ಎಂದು ಕೊಂಡಿರುವೆ ಎಂದು ಹೇಳಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



