ಬೆಂಗಳೂರು:ಪತ್ನಿಯ ಕಾಟಕ್ಕೆ ಬೆಸೆತ್ತು ಪೋಲಿಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪೋಲಿಸ್ ಹೆಡ್ ಕಾನ್ಸ್ಟೇಬಲ್ ನನ್ನು ತಿಪ್ಪಣ್ಣ ಗುರುತಿಸಲಾಗಿದ್ದು ಇವರು ಬೆಂಗಳೂರು ನಗರದ ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಜೀವ ಬೆದರಿಕೆ ಇತ್ತು ಡೆತ್ ನೋಟ್ ನಲ್ಲಿ ಪ್ರಸ್ತಾಪ!
ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದು ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು ಮನೆ ಮಾಡಿತ್ತು ಪತ್ನಿ ಮತ್ತು ಆಕೆಯ ತಂದೆ ಯಮುನಪ್ಪ ಇಬ್ಬರು ಸೇರಿ ಮಾನಸಿಕವಾಗಿ ಹಿಂಸೆ ನೀಡುತ್ತ ಹಿಯ್ಯಾಳಿಸಿ ಅಶ್ಲೀಲವಾಗಿ ಬೈದು ಕಿರುಕುಳ ಕೊಡುತ್ತಿದ್ದರು ಜೊತೆಗೆ ಮಾವ ಯಮನಪ್ಪನಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಪ್ರಸ್ತಾಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪತ್ನಿ ಟಾರ್ಚರಗೆ ಸಾಫ್ಟವೇರ್ ಉದ್ಯೋಗಿ ಅತ್ಮಹತ್ಯೆ
ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



