ಶ್ರೀನಿವಾಸಪುರ:ಮನೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಹಾಡು ಹಗಲೆ ನಡೆದಿರುತ್ತದೆ,ಕುಟುಂಬದವರು ಕೃಷಿಕಾರ್ಮಿಕರಾಗಿದ್ದು ಕೂಲಿಗಾಗಿ ಹೋಗಿದ್ದ ವೇಳೆ ಕಳ್ಳತನ ನಡೆದು ಮನೆಯಲ್ಲಿದ್ದ ಸುಮಾರು 25 ಗ್ರಾಂ ಮಾಂಗಲ್ಯ ಸರ,ನಗದನ್ನು ಕಳ್ಳರು ಕದ್ದೊಯಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಹಾಲಿನ ಸೊಸೈಟಿ ಪಕ್ಕದಲ್ಲಿರುವ ದ್ಯಾವಮ್ಮ ಎನ್ನುವರಿಗೆ ಸೇರಿದ ಮನೆಯಲ್ಲಿ ಹಗಲು ಸುಮಾರು ಮೂರುಗಂಟೆ ಸಮಯದಲ್ಲಿ ಮನೆಗೆ ಹಾಕಿದ್ದ ಬೀಗ ಹೊಡೆದು ಕಳ್ಳತನ ಮಾಡಿರುವುದಾಗಿ ಎಂದು ಮನೆಯವರು ಶ್ರೀನಿವಾಸಪುರ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಸ್ಥಳಕ್ಕೆ ಪೋಲಿಸ್ ಇನ್ಸಪೇಕ್ಟರ್ ಗೊರವನಕೊಳ್ಳ ಹಾಗೂ ಸಬ್ ಇನ್ಸಪೇಕ್ಟರ್ ಜಯರಾಮ್ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯಲ್ಲಿ ಹಾಡು ಹಗಲೆ ಕಳ್ಳರ ಕೈಚಳಕಕ್ಕೆ ಕಲ್ಲೂರು ಗ್ರಾಸಮಸ್ಥರು ಏಕಾಏಕಿ ಬೆಚ್ಚಿಬಿದ್ದಾರೆ
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



