ನ್ಯೂಜ್ ಡೆಸ್ಕ್:ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಭಾರತದ ಒರ್ವ ಟೆಕ್ಕಿ ಮಹಿಳೆ ತಮ್ಮ ಭಾರತದ ಮನೆಯಲ್ಲಿ ನಡೆಯುತ್ತಿದ್ದ ಕಳ್ಳತನ ತಡೆದಿದ್ದಾರೆ.
ಇದು ನಡೆದಿರುವುದು ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಮನೆಯಲ್ಲಿ ಅಮೇರಿಕಾದಲ್ಲಿರುವ ಅವರ ಪುತ್ರಿ ಶೃತಿ ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆಯುವ ಮೂಲಕ ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲ ವರ್ಷಗಳ ಹಿಂದೆ ಸ್ವದೇಶಕ್ಕೆ ಆಗಮಿಸಿದ್ದ ಶೃತಿ ತಂದೆ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅದನ್ನು ನೋಡಲು ತಮ್ಮ ಮೊಬೈಲಿಗೆ ಬರುವಂತೆ ಸಿಂಕ್ ಮಾಡಿಸಿದ್ದರು,ಮಂಗಳವಾರ ತಡರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್ ಇಬ್ಬರು ಹನಮಂತಗೌಡ ಸಂಕಪ್ಪನವರ್ ಮನೆಗೆ ನುಗ್ಗಿದ್ದಾರೆ.ಇದೆ ಸಮಯದಲ್ಲಿ ಅಮೇರಿಕಾದಲ್ಲಿದ್ದ ಶ್ರುತಿ ಅಲ್ಲಿಂದಲೇ ಮನೆಯಲ್ಲಿನ ವಿದ್ಯಮಾನ್ಯಗಳನ್ನು ಗಮನಿಸಿದ್ದಾರೆ ಭಾರತದಲ್ಲಿ ಮಧ್ಯರಾತ್ರಿ ಆಗಿದ್ದರೆ ಅಮೆರಿಕದಲ್ಲಿ ಮಧಾಹ್ನದ 3:30ರ ಸಮಯವದು. ಹೀಗೆ ಮೊಬೈಲ್ ನೋಡುತ್ತಿದ್ದಾಗ ಮನೆಗೆ ಕಳ್ಳರು ನುಗ್ಗಿದ ದೃಶ್ಯವನ್ನು ನೋಡಿ ಕೂಡಲೇ ಶೃತಿ ಪೋಷಕರಿಗೆ ಕರೆ ಮಾಡಿದ್ದಾರೆ.
ತಕ್ಷಣ ಎಚ್ಚೆತ್ತ ಶೃತಿ ಪೋಷಕರು ಬಾಗಿಲು ತೆರೆಯದೇ ಮನೆಯ ಎಲ್ಲಾ ದೀಪ ಆನ್ ಮಾಡಿ ಕೂಗಾಡಿದ್ದಾರೆ. ದಿಢೀರ್ ಮನೆಯ ಲೈಟ್ ಆನ್ ಆಗಿದ್ದನ್ನು ಕಂಡು ಕಳ್ಳರು ಶಾಕ್ಗೆ ಒಳಗಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಎಚ್ಚೆತ್ತ ಹನುಮಂತಗೌಡ, ಮನೆ ಬಾಗಿಲು ತೆರೆದಾಗ ಚಡ್ಡಿ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಒಬ್ಬನ ಮುಖಕ್ಕೆ ಮಂಕಿ ಕ್ಯಾಪ್, ಮತ್ತೊಬ್ಬನ ಮುಖದಲ್ಲಿ ಮಾಸ್ಕ್, ಮೈಮೇಲೆ ಶರ್ಟ್ ಇದೆ ಆದರೆ ಪ್ಯಾಂಟೇ ಇಲ್ಲ. ಇರೋದು ಬರೀ ಚಡ್ಡಿ ಧರಿಸಿದ್ದರು. ಸದ್ಯ, ಅಮೆರಿಕದಲ್ಲಿ ನೆಲೆಸಿದ್ದ ಸಾಫ್ಟ್ವೇರ್ ಎಂಜಿನಿಯರ್ ಶ್ರುತಿ ಸಮಯಪ್ರಜ್ಞೆಯಿಂದ ಮನೆ ಕಳ್ಳತನ ತಪ್ಪಿದೆ.ಈ ಬಗ್ಗೆ ಕೇಸ್ ದಾಖಲಿಸಿಕೊಂಡಿರುವ ಮುಧೋಳ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



