ನ್ಯೂಜ್ ಡೆಸ್ಕ್: ತಿರುಪತಿಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ.
ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎ.ರಾಜಶೇಖರ್ ಬಾಬು ತಮ್ಮ ಅವರು ತಮ್ಮ ಹುಟ್ಟೂರು ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಪ್ರತಿ ಭಾನುವಾರ ಚರ್ಚ್ ನ ಪ್ರಾರ್ಥನೆಗಳಲ್ಲಿ ಭಾಗವಹಿಸುತ್ತಿದ್ದರು ಎಂಬ ಆರೋಪವಿದೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿರುವುದರಿಂದ, ಇದು ಉದ್ಯೋಗಿಗಳಿಗೆ ನಿಗದಿಪಡಿಸಿರುವ ನೀತಿ ಸಂಹಿತೆಯ(Violation Of Hindu Code) ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಆಧಾರದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (TTD) ಜಾಗ್ರತ ದಳದ ಅಧಿಕಾರಿಗಳು AEOಎ. ರಾಜಶೇಖರ್ ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿ ವಿಚಾರಣೆ ನಡೆಸಿ ಟಿಟಿಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕ್ರಮವು ಟಿಟಿಡಿ ಜಾಗೃತ ಇಲಾಖೆಯ ವರದಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೂತನ ಆಡಳಿತ ಮಂಡಳಿ ರಚನೆಯಾದ ಮೇಲೆ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



