ಶ್ರೀನಿವಾಸಪುರ:ಕೋಲಾರದ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಎರಡು ನಿಮಿಶ ಮೌನಾಚರಣೆ ಮಾಡಿದ ಶ್ರೀನಿವಾಸಪುರದ ಪತ್ರಕರ್ತರು ಶ್ರದ್ದಾಂಜಲಿ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಮಾತನಾಡಿ ಅಗಲಿದ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರನ್ನು ಸ್ಮರಿಸುವುದು ಸಂಘದ ಕರ್ತವ್ಯವಾಗಿದೆ. ಎಲ್ಲರೊಂದಿಗೆ ಬೆರೆತು ಸಾಮಾಜಿಕ ಬದ್ಧತೆಯನ್ನು ಮೆರೆದವರು.ಅವರು ಜಿಲ್ಲೆಯ ಪತ್ರಿಕೋದ್ಯಮಕ್ಕೆ ನೀಡಿರುವ ಕೊಡುಗೆ ಅಪಾರ ಅನನ್ಯ ಎಂದರು.

ಹಿರಿಯ ಪತ್ರಕರ್ತ ಚೌಡರೆಡ್ಡಿ ಮಾತನಾಡಿ ಎಂ.ಜಿ.ಪ್ರಭಾಕರ್ ಅವರು ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸಾಮಾಜಿಕ ಬದ್ಧತೆ ಕಾಳಜಿ ಉಳ್ಳ ಪತ್ರಕರ್ತರಾಗಿದ್ದರು ಎಂದು ಅವರ ಗುಣಗಾನ ಮಾಡಿದರು.ಹಿರಿಯ ಪತ್ರಕರ್ತರಾದ ಚೌಡಪ್ಪ ಹಾಗು ಕೆ.ವಿ.ನಾಗರಾಜ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ನಿರ್ದೇಶಕ ಕಲ್ಲೂರುಮಂಜುನಾಥರೆಡ್ಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚುಂಬಕವಾಣಿ ಲಕ್ಷ್ಮಣ್, ಖಜಾಂಜಿ ಲಕ್ಷ್ಮಣಬಾಬು,ಕೋಲಾರ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಉಪೇಂದ್ರ, ಪತ್ರಕರ್ತರಾದ ವೇಣೂಗೋಪಾಲ್, ಕಿಶೋರ್, ಸುರೇಶ್ ಮುಂತಾದವರು ಇದ್ದರು.
ಮುಳಬಾಗಿಲು ಪತ್ರಕರ್ತರಿಂದ ಶ್ರದ್ಧಾಂಜಲಿ.
ಅಗಲಿದ ಹಿರಿಯ ಪತ್ರಕರ್ತ ಪ್ರಭಾಕರ್ ಅವರಿಗೆ ಮುಳಬಾಗಿಲು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದೇವಾನಂದ ನೇತೃತ್ವದಲ್ಲಿ ಸಭೆ ನಡೆಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.



