ಶ್ರೀನಿವಾಸಪುರ:ಶ್ರೀನಿವಾಸಪುರ-ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚರ್ ಕ್ಯಾಂಟರ್ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಭೀಕರ ಅಪಘಾತವಾಗಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.
ದ್ವಿಚಕ್ರ ವಾಹನ ಡಿಕ್ಕಿ ಹೋಡೆದ ರಭಸಕ್ಕೆ ದ್ವಿಚಕ್ರ ವಾಹನಕ್ಕೆ ಬೆಂಕಿ ಸೋಕಿದ್ದು ವಾಹನ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ದ್ವಿಚಕ್ರವಾಹನದಲ್ಲಿದ್ದ ಮೃತ ವ್ಯಕ್ತಿಗಳನ್ನು ಕೆಜಿಎಫ್ ತಾಲ್ಲೂಕು ಕದಿರಿಗಾನಕುಪ್ಪ ಗ್ರಾಮದ ನಿವಾಸಿ ರಘುಪತಿ (57) ಹಾಗೂ ಆಂಧ್ರದ ಚಿತ್ತೂರು ಜಿಲ್ಲೆಯ ನಕ್ಕನಪಲ್ಲಿ ಗ್ರಾಮದ ನಿವಾಸಿ ಕಾಳಪ್ಪಗೌಡ (53) ಎಂದು ಗುರುತಿಸಲಾಗಿದೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸ್ಥಳಕ್ಕೆ ಮುಳಬಾಗಿಲು ಡಿವೈಎಸ್ಪಿ ಮನಿಷಾ, ಶ್ರೀನಿವಾಸಪುರ ಪೊಲೀಸ್ ಇನ್ಸ್ಪೆಕ್ಟರ್ ಶಂಕರಾಚಾರಿ, ಹಾಗೂ ಸಬ್ಇನ್ಸ್ಪೆಕ್ಟರ್ ಜಯರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



