ನ್ಯೂಜ್ ಡೆಸ್ಕ್:ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (FKCCI) ಅಧ್ಯಕ್ಷರಾಗಿ ಉಮಾ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸಂಸ್ಥೆಯ 108 ವರ್ಷಗಳ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
1916 ರಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ್ದ ಎಫ್ಕೆಸಿಸಿಐ ಯಲ್ಲಿ ಸಾಂಪ್ರದಾಯಿಕವಾಗಿ ಪುರುಷರು ಮುನ್ನಡೆಸಿಕೊಂಡು ಬರುತ್ತಿರುವುದು ವಾಡಿಕೆ ಆದರೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷತೆ ವಹಿಸಿಕೊಂಡಿದ್ದು ಸಂಸ್ಥೆಗೆ ಇದೊಂದು ಹೆಗ್ಗುರುತು ಎಂದು ಚೇಂಬರ್ ಹೇಳಿಕೆಯಲ್ಲಿ ತಿಳಿಸಿದೆ.ಉಮಾ ರೆಡ್ಡಿಯವರು ಸೆಪ್ಟೆಂಬರ್ 28, 2024 ರಂದು 2024-25ನೇ ಸಾಲಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದ (FKCCI) ಹಿರಿಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.ಉಮಾ ರೆಡ್ಡಿಯವರು ಮೆಸರ್ಸ್ ಹೈಟೆಕ್ ಮ್ಯಾಗ್ನೆಟಿಕ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್, ಟ್ರಾನ್ಸ್ಫಾರ್ಮರ್ ಕಾಯಿಲ್ಗಳ ತಯಾರಿಕೆ ಇತ್ಯಾದಿಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೊದಲ ತಲೆಮಾರಿನ ಉದ್ಯಮಿಯಾಗಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್ಕೆಸಿಸಿಐ) 2024-25ನೇ ಸಾಲಿನಲ್ಲಿ ಅಧ್ಯಕ್ಷರಾಗಿದ್ದ ಎಂ ಜಿ ಬಾಲಕೃಷ್ಣ ಅವರು 2024-25ನೇ ಸಾಲಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್ಕೆಸಿಸಿಐ) ಅಧ್ಯಕ್ಷರಾಗಿ ಸೆಪ್ಟೆಂಬರ್ 28, 2024 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು 15 ವರ್ಷಗಳಿಗೂ ಹೆಚ್ಚು ಕಾಲ ಒಕ್ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ.
ಹಿರಿಯ ಉಪಾಧ್ಯಕ್ಷರಾಗಿ ಸಾಯಿರಾಮ್ ಪ್ರಸಾದ್
ಟಿ.ಸಾಯಿರಾಮ್ ಪ್ರಸಾದ್ ಅವರು ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರು ಕಳೆದ 30 ವರ್ಷಗಳಿಗೂ ಹೆಚ್ಚು ಕಾಲದಿಂದ ಫೆಡರೇಶನ್ನ ಸದಸ್ಯರಾಗಿದ್ದಾರೆ. ಅವರು ಎಪಿಎಂಸಿಯಲ್ಲಿ M/s. C V Thimmaiah and Co. ಹೆಸರಿನಲ್ಲಿ ಅಕ್ಕಿ ವ್ಯಾಪಾರ ಹೊಂದಿದ್ದು, ತಮ್ಮ ಕುಟುಂಬದ ಪಾರಂಪರಿಕ ಅಕ್ಕಿ ಮಂಡಿ ವ್ಯವಹಾರವನ್ನು ನಡೆಸಿಕೊಂಡು ಬರುತ್ತಿರುವ ಸಾಯಿರಾಂ ಪ್ರಸಾದ್ ಎಪಿಎಂಸಿ ಸಮಿತಿಯ ನಿರ್ದೇಶಕರಾಗಿ, ಬೆಂಗಳೂರು ಧಾನ್ಯ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಅಲಂಕರಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



