ಶ್ರೀನಿವಾಸಪುರ:ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೊಬ್ಬಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕು ಕಸಬಾ ಹೋಬಳಿ ಪಾಳ್ಯ ಗ್ರಾಮದಲ್ಲಿ ನಡದಿದೆ.
ಕೊಲೆಯಾದ ಮಹಿಳೆಯನ್ನು ಗ್ರಾಮದ ಶ್ರೀರಾಮರೆಡ್ಡಿ ಎಂಬುವರ ಪತ್ನಿ ರೂಪಾ (38) ಎಂದು ಗುರುತಿಸಲಾಗಿದೆ.ಸೋಮವಾರ ಮಧ್ಯಾಹ್ನ ರೂಪಾ ಹಸು ಮೇಯಿಸಲು ಹೋದವರು ಮುಸ್ಸಂಜೆಯಾದರು ಮನೆಗೆ ವಾಪಸ್ಸು ಬಾರದ ಹಿನ್ನಲೆ ಕುಟುಂಬಸ್ಥರು ಗ್ರಾಮದ ಸುತ್ತಮುತ್ತಲು ಹುಡುಕಾಡಿದಾಗ ಗ್ರಾಮದ ಹೊರವಲಯದ ಚುರುವುನಹಳ್ಳಿಗೆ ಹೋಗುವ ದಾರಿಯಲ್ಲಿನ ಕೆರೆ ಕಾಲುವೆ ಬಳಿ ರೂಪಾ ರಕ್ತದ ಮಡವಿನಲ್ಲಿ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ ಕುಟುಂಬದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಶ್ರೀನಿವಾಸಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಇತ್ತು ಪರಿಶೀಲನೆ ನಡೆಸಿದ್ದಾರೆ, ಮೊಬೈಲ್ ಕಾಲ್ ತನಿಖೆ ಒಳಪಡಿಸಿದಾಗ ಕೊಲೆ ಆರೋಪಿ ಸುಳಿವು ಸಿಕ್ಕಿದೆ ಗ್ರಾಮದ ಆನಂದಪ್ಪ ಎಂಬುದನ್ನು ಪತ್ತೆ ಹಚ್ಚಿದ್ದಾರೆ ಪೋಲಿಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಮೃತ ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಇದ್ದ ವಿಚಾರ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆ ಹಾಗು ಆರೋಪಿ ನಡುವೆ ಇತ್ತಿಚಿಗೆ ಹಣಕಾಸು ವಿಷಯವಾಗಿ ವೈಮನಸ್ಯ ಏರ್ಪಟ್ಟ ಹಿನ್ನಲೆಯಲ್ಲಿ ಮಹಿಳೆಯನ್ನು ಕತ್ತು ಕೊಯ್ದು ಹತ್ಯೆ ಮಾಡರಬಹುದು ಎಂದು ಶಂಕಿಸಲಾಗಿದೆ.ಆರೋಪಿ ಕೊಲೆ ಮಾಡಲು ಬಳಸಿದ್ದ ಎನ್ನಲಾದ ಕುಡುಗೊಲನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್,ಇನ್ಸಪೇಕ್ಟರ್ ಗೊರವನಕೊಳ್ಳ ಸೇರಿದಂತೆ ಪೋಲಿಸ್ ಸಿಬ್ಬಂದಿ ಭೇಟಿಕೊಟ್ಟಿದ್ದರು. ಇಂದು ಮಂಗಳವಾರ ಬೆಳಿಗ್ಗೆ ಪೋಲಿಸರು ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆ ತಂದು ಮಹಜರು ನಡೆಸಿದ್ದಾರೆ
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



