ಶ್ರೀನಿವಾಸಪುರ:ಸ್ತ್ರೀಯರ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಸಾಧನೆಗಳನ್ನು ಹಾಗು ಸಮಾಜಕ್ಕೆ ಅವರು ನೀಡಿರುವ ಇತರೆ ಸಾಧಕ ಕೊಡುಗೆಗಳನ್ನು ಸಂಭ್ರಮಿಸುವ ದಿನವೆ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾದ ಮಂಜುಳಾ ಭೀಮರಾವ್ ಹೇಳಿದರು ಅವರು ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಹೆಣ್ಣುಮಕ್ಕಳಲ್ಲಿ ಅಗಾಧವಾದ ಶಕ್ತಿ ಸಾಧಿಸಬೇಕು ಎಂಬ ಚಲ ಇದೆ ಹಾಗೆ ಮಾತೃವಾತ್ಸಲ್ಯ ಸಮರ್ಪಣಾ ಮನೋಭಾವ ಇರುವ ಮಹಿಳೆ ಬಹುಮುಖಿಯಾಗಿ ಸಾಧಿಸಲು ನಿಂತರೆ ಯಾವುದೆ ತಾರತಮ್ಯ ಅಡ್ಡಿಯಾಗದು ಎಂದರು.
ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯೆ ಗೌಸಿಯಾಭಾನು ಮಾತನಾಡಿ ವಿದ್ಯಾರ್ಥಿನಿಯರು ವಿದ್ಯಾರ್ಥಿ ದೆಸೆಯಲ್ಲಿ ವೈಙ್ಞಾನಿಕವಾಗಿ ಸಮಾಜದ ವ್ಯವಸ್ಥೆಯ ಬಗ್ಗೆ ಅರಿಬೇಕಿದೆ ದಿನವು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರನ್ನು ಅಸಮಾನ್ಯ ಸಾಧನೆ ಮಾಡುತ್ತಿದ್ದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಲು ಶ್ರಮಿಸುತ್ತಿದ್ದಾಳೆ ಎಂದರು.ಮಹಿಳಾ ಸಾಧಕಿಯರ ಆದರ್ಶವನ್ನು ತಗೆದುಕೊಂಡು ವಿದ್ಯಾರ್ಥಿನಿಯರು ಸಮಾಜ ಹೆಮ್ಮೆ ಪಡುವಂತೆ ಸಾಧನೆ ಮಾಡುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಶಾಲ ಮುಖ್ಯಶಿಕ್ಷಕ ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು ಶಾಲ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆನಂದ್ ರೆಡ್ಡಿ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಮಂಜುಳಾ ಸಾಹಿತಿಗಳಾದ ಶಂಕರೇಗೌಡ ಪನಸಮಾಕಲಳ್ಳಿ ಚೌಡರೆಡ್ಡಿ .ಶಶಿಕಲಾ ವಿಜಯಮ್ಮ ಗೌರಮ್ಮ ಶ್ರೀದೇವಿ ಅಶ್ವಿನಿ ಗೀತಾಂಜಲಿ ರೆಡ್ಡಮ್ಮ ಮಹೇಶ್ ಪ್ರಸನ್ ನಾಗರಾಜ್ ನಾರಾಯಣಸ್ವಾಮಿ ರಾಮಚಂದ್ರಪ್ಪ ಚೇತನ್,ಸಿಆರ್ಪಿ ರಾಧಾಕೃಷ್ಣ ಮುಂತಾದವರು ಇದ್ದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾಗಿರುವ ಮಂಜುಳಾ ಭೀಮರಾವ್ ಪರಿಸರ ಸಂರಕ್ಷಣೆ ಸೇರಿದಂತೆ ವಿಜ್ಞಾನ ವಿಚಾರವಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುಳಾ ಭೀಮರಾವ್ ಮತ್ತು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗೌಸಿಯ ಬಾನು ರವರನ್ನು ಶಾಲೆಯ ವಿದ್ಯಾರ್ಥಿಗಳು ಸನ್ಮಾನಿಸಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



