ನ್ಯೂಜ್ ಡೆಸ್ಕ್: ರೈತರು ಹಾಗೂ ಸಾಮಾನ್ಯರ ಹಿತ ದೃಷ್ಟಿಯಿಂದ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿದೆ ಇದಕ್ಕಾಗಿ ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.
ಯಶಸ್ವಿನಿ ಯೋಜನೆ ಜಾರಿಗಾಗಿ ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರು ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಿದೆ.
ಯಶಸ್ವಿನಿ ಯೋಜನೆ ಅಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದ್ದು 4 ಸದಸ್ಯರು ಇರುವ ಕುಟುಂಬಕ್ಕೆ ವರ್ಷಕ್ಕೆ 500 ರೂಪಾಯಿಗಳ ವಂತಿಕೆ ಕಟ್ಟಬೇಕಾಗಿರುತ್ತದೆ.
ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 1, 2022 ರಿಂದ ಪ್ರಾರಂಭವಾಗಲಿದೆ. ಯಶಸ್ವಿ ಯೋಜನೆ ಅವಧಿ 01-01-2023 ರಿಂದ 30-12-2023 ರವರೆಗೂ ಜಾರಿಯಲ್ಲಿರುತ್ತದೆ. 1650 ಖಾಯಿಲೆಗಳಿಗೆ ಈ ಯೋಜನೆ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಯಶಿಸ್ವಿನಿ ಯೋಜನೆಯ ಮಾರ್ಗಸೂಚಿಯಂತೆ ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು,ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ.
ಐದು ವರ್ಷಗಳ ಹಿಂದೆ ಸ್ಥಗಿತವಾಗಿದ್ದ ಜನಪ್ರಿಯ ಯೋಜನೆ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಗೆ ನವೆಂಬರ್ 1 ರಿಂದ ಚಾಲನೆ ಸಿಗಲಿದೆ ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಯಶಸ್ವಿನಿ ಯೋಜನೆ ಜಾರಿಯಾಗಲಿದೆ ಎಂದು ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಸಹಕಾರ ಸಂಘಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ತಿಳಿಸಿದ್ದರು.
ಸಹಕಾರಿ ಸಂಘಗಳ ಸದಸ್ಯರಿಗೆ ಆರೋಗ್ಯ ಸೇವೆ ನೀಡಲು 2003 ರಲ್ಲಿ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿತ್ತು. ಆದರೆ 2018 ರಲ್ಲಿ ರಾಜ್ಯದ ಎಲ್ಲರಿಗೂ ಸಾರ್ವತ್ರಿಕ ಆರೋಗ್ಯ ರಕ್ಷಣೆ ನೀಡಲು ಆರೋಗ್ಯ ಕರ್ನಾಟಕ ಯೋಜನೆ ಅನು ಅನುಷ್ಠಾನಗೊಳಿಸಿತ್ತು ಆದರೆ 2018ರ ಮೇ 31 ರಂದು ಯಶಸ್ವಿನಿ ಆರೋಗ್ಯ ಯೋಜನೆಯನ್ನು ರದ್ದುಗೊಳಿಸಿತ್ತು. ಇದೇ ಯೋಜನೆಯನ್ನು ಈಗ ಮರು ಚಾಲನೆ ನೀಡಲಾಗುತ್ತಿದೆ.ಕಾಂಗ್ರೆಸ್ ನೊಂದಿಗೆ ಮೈತ್ರಿ ಸಂರ್ಕಾದ ಮುಖ್ಯ ಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಯಶಸ್ವಿನಿ ಯೋಜನೆ ಜಾರಿ ಮಾಡುವ ಬಗ್ಗೆ ಹೇಳಿದ್ದರು.